ಪೋಷಕ ಸಂಸ್ಥೆ
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ) ಶಿಕಾರಿಪುರ, ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರದ ಪೋಷಕ ಸಂಸ್ಥೆ. ಇದು ಒಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು ಹಲವು ವರ್ಷಗಳಿಂದ ಶಿಕ್ಷಣ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಸಂಸ್ಥೆಯು ತನ್ನ ಕಾರ್ಯ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಯ ಕಾರ್ಯಕ್ರಮಗಳು, ಮಹಿಳಾ ಸಬಲೀಕರಣ, ಶಿಕ್ಷಣ ಮತ್ತು ವೃತ್ತಿ ತರಬೇತಿಗಳಿಗೆ ಹಾಗೂ ಆರೋಗ್ಯ ಮತ್ತು ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿದೆ. ಈ ಸಂಸ್ಥೆಯ ಕಾರ್ಯ ವೈಖರಿಯ ಮೇರೆಗೆ ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ ಮಂಜೂರಾಗಿ ಕಾರ್ಯ ನಿರ್ವಹಿಸುತ್ತದೆ. ಸಂಸ್ಥೆಯ ಅಧ್ಯಕ್ಷರಾಗಿ ಶ್ರೀ ಎಂ. ಬಿ. ಶಿವಕುಮಾರನವರು ಹಾಗೂ ಕಾರ್ಯದರ್ಶಿಯಾಗಿ ಶ್ರೀ ಬಿ. ವೈ. ರಾಘವೇಂದ್ರರವರು ಕಾರ್ಯ ನಿರ್ವಹಿಸುತ್ತಿದ್ದಾರೆ.