Kumadvathi Apparel Training & Design Center, Shikaripura

Kumadvathi Apparel Training & Design Center

Shikaripura
  08187-224133
  kumadvathiatdc@gmail.com

ಪೋಷಕ ಸಂಸ್ಥೆ

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ (ರಿ) ಶಿಕಾರಿಪುರ, ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರದ ಪೋಷಕ ಸಂಸ್ಥೆ. ಇದು ಒಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು ಹಲವು ವರ್ಷಗಳಿಂದ ಶಿಕ್ಷಣ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಸಂಸ್ಥೆಯು ತನ್ನ ಕಾರ್ಯ ಕ್ಷೇತ್ರದಲ್ಲಿ ಆರ್ಥಿಕ ಅಭಿವೃದ್ಧಿಯ ಕಾರ್ಯಕ್ರಮಗಳು, ಮಹಿಳಾ ಸಬಲೀಕರಣ, ಶಿಕ್ಷಣ ಮತ್ತು ವೃತ್ತಿ ತರಬೇತಿಗಳಿಗೆ ಹಾಗೂ ಆರೋಗ್ಯ ಮತ್ತು ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿದೆ. ಈ ಸಂಸ್ಥೆಯ ಕಾರ್ಯ ವೈಖರಿಯ ಮೇರೆಗೆ ಕುಮದ್ವತಿ ಸಿದ್ಧ ಉಡುಪು ತರಬೇತಿ ಹಾಗೂ ಉತ್ಪಾದನಾ ಕೇಂದ್ರ ಮಂಜೂರಾಗಿ ಕಾರ್ಯ ನಿರ್ವಹಿಸುತ್ತದೆ. ಸಂಸ್ಥೆಯ ಅಧ್ಯಕ್ಷರಾಗಿ ಶ್ರೀ ಎಂ. ಬಿ. ಶಿವಕುಮಾರನವರು ಹಾಗೂ ಕಾರ್ಯದರ್ಶಿಯಾಗಿ ಶ್ರೀ ಬಿ. ವೈ. ರಾಘವೇಂದ್ರರವರು ಕಾರ್ಯ ನಿರ್ವಹಿಸುತ್ತಿದ್ದಾರೆ.