ಸಾಂಸ್ಕೃತಿಕ ಮತ್ತು ಕ್ರೀಡಾ ವೇದಿಕೆ ಉದ್ಘಾಟನೆ ಕಾರ್ಯಕ್ರಮ
ಶಿಕಾರಿಪುರ 25-07-2015: ಮುಂದುವರಿಯುತ್ತಿರುವ ಜಾಗತಿಕ ಬೆಳವಣಿಗೆಯಲ್ಲಿ ವಿದ್ಯಾರ್ಥಿಗಳು ಓದುವುದರ ಜೊತೆಗೆ ಉತ್ತಮ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಜಿ. ಆರ್ ಹೆಗಡೆ ನಗರದ ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 2015-16 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡೆ, ರೆಡ್‌ಕ್ರಾಸ್ ಹಾಗೂ ರಾಷ್ಟ್ತೀಯ ಸೇವಾ ಯೋಜನೆ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಸಿ ಮಾತಾನಾಡಿದರು. ಕರ್ನಾಟಕದ ವಿದ್ಯಾರ್ಥಿಗಳು ಇತ್ತಿಚೆಗೆ ಭಾರತೀಯ ಆಡಳಿತ ಸೇವೆಗಳ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಕಾಲೇಜುಗಳಲ್ಲಿ ಇರುವ ವಿವಿದ ವೇದಿಕೆಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಮಾತ್ರ ಜೀವನದಲ್ಲಿ ಮುಂದೆ ಬರಲು ಸಹಾಯವಾಗುತ್ತದೆ. ಕರ್ನಾಟಕದ ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಹೋಗಿ ಕೆಲಸ ಮಾಡುವಲ್ಲಿ ಹಿಂಜರಿಯುತ್ತಿರುವುದು ವಿಷಾದನೀಯ ಎಂದರು.
ನಂತರ ಮಾತಾನಾಡಿದ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ತೇಜಸ್ವಿನಿ ರಾಘವೇಂದ್ರ ಮಾತಾನಾಡಿ ಕೌಶಲಗಳೊಂದಿಗೆ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಡಾ. ವಿನಾಯಕ ಕೆ. ಎಸ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಚೇತನ್ ಕುಮರ್ ಸ್ವಾಗತಿಸಿ, ಕು. ಅನುಷಾ ವಂದಿಸಿದರು. ವಿದ್ಯಾರ್ಥಿನಿಯರಾದ ಸಹೇರಾ ಬಾನು ಹಾಗೂ ಐಶ್ವರ್ಯ ನಿರೂಪಿಸಿದರು.