024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ
ಮೈತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿನಾಂಕ 15.03.2025 ರಂದು 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಮೈತ್ರಿ ಶಿಕ್ಷಣ ಸಮೂಹದ ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಶ್ರೀ. ನಿಶಿತ್. ಕೆ ಎಚ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಡಯಟ್ ಹಿರಿಯ ಉಪನ್ಯಾಸಕರಾದ ಶ್ರೀ ಹರಿಪ್ರಸಾದ್ ಜಿ ವಿ ರವರು ಆಗಮಿಸಿದ್ದು ಭವಿಷ್ಯತ್ತಿನ ವಿದ್ಯಾರ್ಥಿಗಳಿಗೆ ಬೋಧಿಸಲು ಬೇಕಾದ ಶಿಕ್ಷಕರ ಅಗತ್ಯ ಕೌಶಲಗಳ ಬಗ್ಗೆ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಉಪನ್ಯಾಸಕರುಗಳು, ಬೋಧಕೇತರ ಸಿಬ್ಬಂದಿ ವರ್ಗ ಮತ್ತು ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರತಿಕ್ಷಣಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು.