75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ
ಸ್ವಾತಂತ್ರ್ಯ ದಿನಾಚರಣೆಯ ಅಮೃತಮಹೋತ್ಸವದ ಈ ಸುದಿನದಂದು ಯುವಜನರು SKILL INDIA AND FIT INDIA ದ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು.
ಎಂದು ಶ್ರೀಮತಿ ಅರುಣಾದೇವಿ ಎಸ್. ವೈ ರವರು, ನಿರ್ದೇಶಕರು, ಜನ ಶಿಕ್ಷಣ ಸಂಸ್ಥಾನ, ಶಿವಮೊಗ್ಗ ಇವರು ಮೈತ್ರಿ ಕಾಲೇಜಿನದಲ್ಲಿ ಹಮ್ಮಿಕೊಳ್ಳಲಾಗಿದ್ದ 75ನೇ ಸ್ವತಂತ್ರ್ಯೋತ್ಸವದ ದ್ವಜಾರೋಹಣವನ್ನು ನೆರವೇರಿಸಿ ನುಡಿದರು.
ಶ್ರೀಮತಿಯವರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ ನಾವೆಲ್ಲರು ಸೇರಿ ದುಡಿಯೋಣ ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಿಕ್ಷಣದ ಆಡಳಿತಾಧಿಕಾರಿಗಳಾದ ಶ್ರೀ ನಿಶಿತ್ ಕೆ. ಹೆಚ್, ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಶಾಲಿನಿ. ಜೆ, ರವರು ಮತ್ತು ಮೈತ್ರಿ ಕಾಲೇಜ್ ಆಫ್ ನರ್ಸಿಂಗ್‌ನ ಪ್ರಾಂಶುಪಾಲರಾದ ಶ್ರೀಮತಿ ಶೃತಿ. ಎನ್ ರವರು, ಮೈತ್ರಿ ಶಿಕ್ಷಣ ಸಮೂಹದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಕು. ನಿಹಾರಿಕ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಶ್ರೀಮತಿ ಸ್ಟಿಜಿ ಸಾಮ್ಯುಯಲ್ ಸ್ವಾಗತಿಸಿದರು. ಕು. ಅರ್ಪಿತ ಎಂಜಲ್ ಜಿ ಯವರು ನಿರೂಪಿಸಿದರು. ಶ್ರೀ ಯಶವಂತ ಬಿ ವಂದಿಸಿದರು. ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.