Mythri College of Nursing,  Shivamogga

Mythri College of Nursing

Shivamogga
  08182 240065
  mythrinursinggroup@gmail.com
Home > Latest Updates > 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ

75ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಭಾರತದ ಘನ ಪ್ರಜಾಪ್ರಭುತ್ವದ ಯಶಸ್ವಿಗೆ ಪ್ರತಿಯೊಬ್ಬ ನಾಗರೀಕರು ಜವಾಬ್ದಾರಿಯುತವಾಗಿ ಮತ್ತು ಸಕ್ರೀಯವಾಗಿ ತೊಡಗಿಕೊಳ್ಳಬೇಕು ಎಂದು ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಸಮೂಹದ ನಿರ್ದೇಶಕರಾದ ಶ್ರೀಯುತ ನಿಶಿತ್ ಕೆ ಹೆಚ್ ರವರು, ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು.

ಶ್ರೀಯುತರು ಮುಂದುವರೆಯುತ್ತಾ ದೇಶದ ಸಂವಿಧಾನದ ರಚನೆ ಮತ್ತು ಪ್ರಜಾಪ್ರಭುತ್ವ ದೇಶವನ್ನಾಗಿಸುವಲ್ಲಿ ಅನೇಕ ಮಹನಿಯರು ತಮ್ಮದೇ ಆದ ಕೊಡುಗೆಯನ್ನು ಸಲ್ಲಿಸಿದ್ದು ಭಾರತೀಯ ಪ್ರಜೆಗಳಾದ ನಾವು ಅವರ ಉದಾತ್ತ ಕೊಡುಗೆಯನ್ನು ಸ್ಮರಿಸುತ್ತಾ ಭವ್ಯ ಭಾರತದ ಏಳಿಗೆಗೆ ಕಾರಣಿಭೂತರಾಗಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಾಲಿನಿ ಜೆ ರವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೃತಿ .ಎನ್ ಹಾಗೂ ಸಂಸ್ಥೆಯ ಎಲ್ಲಾ ಬೋಧಕ ಬೋಧಕೇತರ ವರ್ಗದವರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ವಿದ್ಯಾರ್ಥಿಗಳು ಆಸಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮಲ್ಲಿ ರಾಷ್ಟ್ರೀಯ ಐಕ್ಯತೆಯನ್ನು ಬಿಂಬಿಸುವ ನೃತ್ಯ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಕು.ಲಕ್ಷ್ಮೀ ಎನ್ ಮತ್ತು ಸಂಗಡಿಗರು ಪ್ರಾರ್ಥಿಸಿ, ಕು.ಸವಿತಾ.ಎಸ್ ವಂದಿಸಿ, ಕಾರ್ಯಕ್ರಮವನ್ನು ಕು.ಲತಾ ಹೆಚ್‌ರವರು ನಿರೂಪಿಸಿದರು.