78 ನೇ ಸ್ವಾತಂತ್ರ್ಯ ದಿನಾಚರಣೆ
“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಪ್ರತಿಫಲವಾಗಿ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು ವಿಶ್ವಗುರುವಾಗಿ ಜಾಗತಿಕವಾಗಿ ಮುಂಚೂಣಿಯಲ್ಲಿದೆ.”ಎಂದು ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ನಿಶಿತ್ ಕೆ. ಹೆಚ್, ರವರು ಮೈತ್ರಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ 78 ನೇ ಸ್ವತಂತ್ರ್ಯೋತ್ಸವದ ದ್ವಜಾರೋಹಣವನ್ನು ನೆರವೇರಿಸಿ ನುಡಿದರು.
ಶ್ರೀಯುತರು ಮುಂದುವರಿಯುತ್ತಾ, ಭಾರತೀಯರಾದ ನಾವೆಲ್ಲರೂ ಸ್ವಾವಲಂಬಿ ದೇಶ ನಿರ್ಮಾಣಕ್ಕಾಗಿ ಪ್ರತಿಯೊಬ್ಬರು ಸದಾ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಹಾಗೂ ದುಡಿದ ಹಣದಲ್ಲಿ ದೀನ ದುರ್ಬಲರಿಗೆ ಸಹಾಯ ಮಾಡುವ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು. ಸದೃಢ ಭಾರತದ ನಿರ್ಮಾಣಕ್ಕೆ ನಾವೆಲ್ಲರು ಸೇರಿ ದುಡಿಯೋಣ ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಮೈತ್ರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶಾಲಿನಿ. ಜೆ, ರವರು ಪ್ರಸ್ತುತ ಯುವ ಜನತೆಯು ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ನಮ್ಮ ದೇಶವನ್ನು ಹೊಸ ಜಾಗತಿಕ ಆವಿಷ್ಕಾರದೊಡಗೆ ಕೊಂಡೊಯ್ಯಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮೈತ್ರಿ ಕಾಲೇಜ್ ಆಫ್ ನರ್ಸಿಂಗ್‍ನ ಪ್ರಾಂಶುಪಾಲರಾದ ಶ್ರೀಮತಿ ಶೃತಿ. ಎನ್ ರವರು, ಮೈತ್ರಿ ಶಿಕ್ಷಣ ಸಮೂಹದ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂಧಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಶ್ರೀಮತಿ ಮಮತ ಕೆ ಎಂ ಉಪನ್ಯಾಸಕರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.